ನವದೆಹಲಿ: ಅಕ್ಟೋಬರ್ 5ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೂ ಮೊದಲು ಹರಿಯಾಣದಲ್ಲಿ ಪ್ರಚಾರದ ಕೊನೆಯ ದಿನವಾದ ಇಂದು ಎಕ್ಸ್ನಲ್ಲಿ ಪಿಎಂ ನರೇಂದ್ರ ಮೋದಿ ಪೋಸ್ಟ್ವೊಂದನ್ನು ಮಾಡಿದ್ದಾರೆ. ಕಾಂಗ್ರೆಸ್ ವಿಭಜಕ ಮತ್ತು ಋಣಾತ್ಮಕ ರಾಜಕೀಯವನ್ನು ಮಾಡುತ್ತಿದೆ. ಇದನ್ನು ಹರಿಯಾಣದ ದೇಶಭಕ್ತರಾದ ಜನರು ಎಂದಿಗೂ ಸ್ವೀಕರಿಸುವುದಿಲ್ಲ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.2004-14ರಲ್ಲಿ ಭೂಪಿಂದರ್ ಸಿಂಗ್ ಹೂಡಾ ಅವರೊಂದಿಗೆ ಪಕ್ಷ ಅಧಿಕಾರದಲ್ಲಿದ್ದಾಗ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ಅಳಿಯ ರಾಬರ್ಟ್ ವಾದ್ರಾ ಅವರನ್ನು ಒಳಗೊಂಡ ವಿವಾದಾತ್ಮಕ ಭೂ ವ್ಯವಹಾರಗಳ ಬಗ್ಗೆ ಮಾತನಾಡಿರುವ ಮೋದಿ “ಕಾಂಗ್ರೆಸ್ ಎಂದರೆ ಫಿಕ್ಸರ್ ಮತ್ತು ಅಳಿಯನ ಸಿಂಡಿಕೇಟ್” ಎಂದು ಹೇಳಿದ್ದಾರೆ.