ಗುಜರಾತ್ ಬಗ್ಗೆ ಎಲ್ಲಿಲ್ಲದ ಒಲವು: ಪ್ರಧಾನಿ ಮೋದಿ ಬಗ್ಗೆ ಸಿಎಂ ಸಿದ್ದರಾಮಯ್ಯ ವಾಗ್ದಾಳಿ
2 Views | 2024-11-09 12:35:45
ಪ್ರಧಾನಿ ನರೇಂದ್ರ ಮೋದಿ ತಮ್ಮ ತವರು ರಾಜ್ಯವಾದ ಗುಜರಾತ್ಗೆ ಒಲವು ತೋರಿಸುತ್ತಿದ್ದಾರೆ ಮತ್ತು ದಕ್ಷಿಣ ರಾಜ್ಯಗಳನ್ನು ನಿರ್ಲಕ್ಷಿಸುತ್ತಿದ್ದಾರೆ ಎಂದು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಕೇಂದ್ರ ಸರ್ಕಾರದ ಯೋಜನೆಗಳು ಮತ್ತು ಅನುದಾನಗಳ ವಿತರಣೆಯಲ್ಲಿ ತಾರತಮ್ಯ ಮಾಡಲಾಗುತ್ತಿದೆ ಎಂದ ಅವರು, ಈ ವಿಚಾರದಲ್ಲಿ ಕರ್ನಾಟಕದ ಬಿಜೆಪಿ ಸಂಸದರ ಮೌನವನ್ನು ಖಂಡಿಸಿದ್ದಾರೆ.