ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲಾತಿ: ಸ್ಪಷ್ಟನೆ ನೀಡಿದ ಸಿಎಂ ಕಚೇರಿ
ಬೆಂಗಳೂರು, ನವೆಂಬರ್ 12: ಸರ್ಕಾರದ ಸಿವಿಲ್ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲಿಮರಿಗೆ (Muslim) ಶೇ.4ರಷ್ಟು ಮೀಸಲಾತಿ ನೀಡಲು ರಾಜ್ಯ ಸರ್ಕಾರ (Karnataka Government) ಮುಂದಾಗಿದೆ ಎಂಬ ವಿಚಾರ ಚರ್ಚೆಗೆ ಬರುತ್ತಿದ್ದಂತೆಯೇ ಮುಖ್ಯಮಂತ್ರಿ ಕಚೇರಿ ಸ್ಪಷ್ಟನೆ ನೀಡಿದೆ. ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಮತದಾನ ಒಂದು ದಿನ ಬಾಕಿ ಇರುವಾಗಲೇ ಮೀಸಲಾತಿ ವಿಚಾರ ಮುನ್ನಲೆಗೆ ಬಂದಿದ್ದು, ಕಾಂಗ್ರೆಸ್ (Congress) ಸರ್ಕಾರವನ್ನು ಧರ್ಮ ಸಂಕಷ್ಟಕ್ಕೆ ಸಿಲುಕಿಸಿತ್ತು. ಈ ಚರ್ಚೆ ಮತಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂಬುವುದನ್ನು ಮನಗಂಡ ಕಾಂಗ್ರೆಸ್ ಸರ್ಕಾರ ಕೂಡಲೇ ಎಚ್ಚೆತ್ತು ಸ್ಪಷ್ಟನೆ ನೀಡಿದೆ.